ಗಣರಾಜ್ಯೋತ್ಸವ ಹಿನ್ನೆಲೆ ರಾಜ್ಯದಲ್ಲಿ 'ಹೈ ಅಲರ್ಟ್' : ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಪೊಲೀಸರ ತಪಾಸಣೆ

ಬೆಂಗಳೂರು : ಭಾರತವು ಈ ವರ್ಷ ತನ್ನ 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಗಣರಾಜ್ಯೋತ್ಸವ ಜ.26 ರಂದು ಗಣರಾಜ್ಯೋತ್ಸವ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್ ಆಗಿರುವ ಪೊಲೀಸರು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
6 ಡಿಸಿಪಿ, 10 ಎಸಿಪಿ, 25 ಇನ್ ಸ್ಪೆಕ್ಟರ್ ಗಳನ್ನೊಳಗೊಂಡ ತಂಡ ಬೆಂಗಳೂರಿನಲ್ಲಿ ಹದ್ದಿನ ಕಣ್ಣಿಟ್ಟಿದ್ದು, ತೀವ್ರ ತಪಾಸಣೆ ನಡೆಸುತ್ತಿದೆ.
ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಭಾರತವು ಈ ವರ್ಷ ತನ್ನ 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವನ್ನು ದೇಶದ ಪ್ರತಿಯೊಂದು ಹಳ್ಳಿಯಲ್ಲೂ ಆಚರಣೆ ಮಾಡಲಾಗುತ್ತದೆ.