ಗದಗದಲ್ಲಿ ಭೀಕರ ರಸ್ತೆ ಅಪಘಾತ : ಆಟೋ-ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಗದಗದಲ್ಲಿ ಭೀಕರ ರಸ್ತೆ ಅಪಘಾತ : ಆಟೋ-ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ದಗ : ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.