ಗದಿಗೆಪ್ಪಗೌಡರನಿಂದ ಬಿಜೆಪಿ ಕಾರ್ಪೋರೇಟರ್ ಮೇಲೆ ಹಲ್ಲೆ: ಮೇಯರ್ ಭೇಟಿ

ಗದಿಗೆಪ್ಪಗೌಡರನಿಂದ ಬಿಜೆಪಿ ಕಾರ್ಪೋರೇಟರ್ ಮೇಲೆ ಹಲ್ಲೆ: ಮೇಯರ್ ಭೇಟಿ

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಗಿರೀಶ ಗದಿಗೆಪ್ಪಗೌಡರ, ಮಹಾನಗರ ಪಾಲಿಕೆಯ ಭಾರತೀಯ ಜನತಾ ಪಕ್ಷದ ಸದಸ್ಯೆಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಯರ್ ವೀರೇಶ ಅಂಚಟಗೇರಿ, ಭೇಟಿ ಮಾಡಿದರು.
ಮಹಾನಗರ ಪಾಲಿಕೆ ಸದಸ್ಯೆ ಸುಮಿತ್ರಾ ಗುಂಜಾಳ ಸೇರಿ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದರ ಬಗ್ಗೆ ಮೇಯರ್ ವೀರೇಶ ಅಂಚಟಗೇರಿಯವರು ಮಾಹಿತಿ ಪಡೆದರು.

ಇದೇ ಸಮಯದಲ್ಲಿ ಹಲ್ಲೆ ಮಾಡಿರುವ ಗಿರೀಶ ಗದಿಗೆಪ್ಪಗೌಡರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.