ಗಮನಿಸಿ : 2023-24 ನೇ ಸಾಲಿನ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಗಮನಿಸಿ : 2023-24 ನೇ ಸಾಲಿನ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು 13-02-2023ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.

2023-24ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಮೂಲಕ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 05-01-2023 ರ ಬೆಳಿಗ್ಗೆ 11.00 ರಿಂದ 22-01-2023 ರವರೆಗೆ ನಿಗದಿಪಡಿಸಿ ನಂತರ 02-02 -2023 ರ ವರೆಗೆ ವಿಸ್ತರಿಸಲಾಗಿತ್ತು.ಇದೀಗ 13-02-2023 ರ ವರೆಗೆ ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗಿದೆ. ಇಲ್ಲಿಯವರೆಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು 13-02-2023 ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.