ಗಲಾಟೆ ಮಾಡಿಸಿ ಅಶಾಂತಿ ಸೃಷ್ಟಿಸುವುದೇ ಕಾಂಗ್ರೆಸ್ ಪಕ್ಷದ ಕೆಲಸ - MLC ಎನ್ ರವಿಕುಮಾರ್

ಗಲಾಟೆ ಮಾಡಿಸಿ ಅಶಾಂತಿ ಸೃಷ್ಟಿಸುವುದೇ ಕಾಂಗ್ರೆಸ್ ಪಕ್ಷದ ಕೆಲಸ - MLC ಎನ್ ರವಿಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಗಲಾಟೆ ಮಾಡಿಸಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆರೋಪಿಸಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಬಂಜಾರ-ಲಂಬಾಣಿ ಸಮುದಾಯದ ಹೋರಾಟ ನಡೆಯುತ್ತಿಲ್ಲ.

ಆ ಸಮುದಾಯದ ಕೆಲವು ಕಾಂಗ್ರೆಸ್ ಪಕ್ಷದವರ ಪಿತೂರಿಯಿಂದ ರಾಜ್ಯದ ವಿವಿಧೆಡೆ ಗಲಭೆ ನಡೆದಿದೆ. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತಕ್ಕೆ ಮೊದಲು ಅಲ್ಲಿನ ಕಾಂಗ್ರೆಸ್ಸಿನ ಯುವ ನಾಯಕ, ಪೆಟ್ರೋಲ್ ಬಂಕ್ ಇರುವವರು ಕಾರಣ. ಅವರು ಏನು ಮೀಟಿಂಗ್ ಮಾಡಿದರು, ಪ್ಲಾನ್ ಮಾಡಿದರೆಂಬುದು ಜಗಜ್ಜಾಹೀರಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರು ಹೇಳಿದ ವಿಚಾರ ಜಾರಿಗೊಳಿಸಿದ ಪಕ್ಷ ಮತ್ತು ಸದಾಶಿವ ಆಯೋಗದ ವರದಿಯ ಅಂಶಗಳನ್ನು ಪರಿಗಣಿಸಿ ಜಾರಿಗೊಳಿಸಿದ ಪಕ್ಷ ಬಿಜೆಪಿ ಎಂದು ತಿಳಿಸಿದರು. ಬೊಮ್ಮಾಯಿಯವರು ಮತ್ತು ಅವರ ಸರಕಾರ ಇದನ್ನು ಜಾರಿ ಮಾಡಿದೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಮಾಜಿ ಉಪಮೇಯರ್ ಮತ್ತು ಜಿಲ್ಲಾ ವಕ್ತಾರ ಎಸ್. ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ಕೆ. ಸೋಮಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.