ಗುತ್ತಿಗೆದಾರರಿಂದ ಲಂಚ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಶಾಸಕ ಮಾಡಾಳ್‌ ಪುತ್ರ ಬಂಧನ

ಗುತ್ತಿಗೆದಾರರಿಂದ ಲಂಚ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಶಾಸಕ ಮಾಡಾಳ್‌ ಪುತ್ರ ಬಂಧನ

ಬೆಂಗಳೂರು: ಕೆಎಸ್‌ಡಿಎಲ್‌ ಕಾರ್ಖಾನೆಗೆ ರಾಸಾಯನಿಕ ಪೂರೈಸುವ ಟೆಂಡರ್‌ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಕಾರ್ಖಾನೆಯ ಅಧ್ಯಕ್ಷ, ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪರವಾಗಿ ಪುತ್ರ ಪ್ರಶಾಂತ್‌ ಮಾಡಾಳ್‌ 40 ಲಕ್ಷ ರೂ.

ಲಂಚ ಪಡೆದಿದ್ದು, ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ತಂದೆಯ ಪರವಾಗಿ ಹಣ ಪಡೆಯುತ್ತಿದ್ದಾಗ ಪ್ರಶಾಂತ್‌ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಡಾಳ್‌ 81 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಶಾಸಕ ಸೂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.