ಗೃಹ ಸಚಿವರ ಮನೆಯಲ್ಲಿ ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ; ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಬೀದರ್: ಸ್ಯಾಂಟ್ರೋ ರವಿ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸ್ಯಾಂಟ್ರೋ ರವಿ ಜೊತೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸ್ಯಾಂಟ್ರೋ ರವಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಕಂತೆ-ಕಂತೆ ನೋಟುಗಳು ಲೆಕ್ಕ ಹಾಕುತ್ತಿರುವ ಫೋಟೊ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ.