ಗೆಳತಿಯನ್ನು ಇಂಪ್ರೆಸ್ ಮಾಡಲು ದುಬಾರಿ ಬೈಕ್‌ಗಳನ್ನು ಕದಿಯುತ್ತಿದ್ದ ಯುವಕ ಅರೆಸ್ಟ್!

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದಲ್ಲಿ ದುಬಾರಿ ಮೋಟಾರು ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದು, ಆತನಿಂದ 13 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಸುಭಮ್ ಭಾಸ್ಕರ್ ಪವಾರ್ ತನ್ನ ಗೆಳತಿಯನ್ನು ಮೆಚ್ಚಿಸಲು ದುಬಾರಿ ಬೈಕ್‌ಗಳನ್ನು ಕದ್ದಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ವಲಯ III-ಕಲ್ಯಾಣ) ಸಚಿನ್ ಗುಂಜಾಲ್ ತಿಳಿಸಿದ್ದಾರೆ.
ಸೋಮವಾರ ಆತನನ್ನು ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಲಾತೂರ್, ಸೊಲ್ಲಾಪುರ ಮತ್ತು ಪುಣೆ ಸೇರಿದಂತೆ ವಿವಿಧೆಡೆ ₹ 16.05 ಲಕ್ಷ ಮೌಲ್ಯದ 13 ಕದ್ದ ಮೋಟಾರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.