ಗೋಕಾಕ್‌ ಫಾಲ್ಸ್‌ ಬಳಿ ಯುವಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಗೋಕಾಕ್‌ ಫಾಲ್ಸ್‌ ಬಳಿ ಯುವಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಬೆಳಗಾವಿ: ಗೋಕಾಕ್‌ ಫಾಲ್ಸ್‌ ಬಳಿ ಜಾತ್ರೆಯಲ್ಲಿ ಸಂಭ್ರಮಿಸುತ್ತಿದ್ದ ವೇಳೆ ಗುಂಪೊಂದು ಯುವಕನಿಗೆ ಚಾಕು ಇರಿದು ಗಾಯವಾಗಿರುವ ಘಟನೆ ನಡೆದಿದೆ. ಹಳೆ ವೈಷಮ್ಯದಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನಲ್ಲಿರುವ ಗೋಕಾಕ್‌ ಫಾಲ್ಸ್‌ ಮಹಾಲಿಂಗೇಶ್ವರ ಜಾತ್ರೆ ನಡೆಯುತ್ತಿದೆ.

ಈ ವೇಳೆ ವಿನೋದ್‌ ಎಂಬಾತನಿಗೆ ಚಾಕು ಇರಿಯಲಾಗಿದೆ. ಇದರಿಂದ ಗಂಬೀರ ಗಾಯಗೊಂಡಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋದ ಜಾತ್ರೆಯನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ. ಈ ವೇಳೆ ಏಳು ಜನರ ಗುಂಪೊಂದು ದಾಳಿ ನಡೆಸಿದೆ. ಇದೀಗ ಏಳು ಜನರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಆರು ಜನರ ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಗೋಕಾಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.