ಗೋಣಿಕೊಪ್ಪಲು ಅಂಗಡಿಯಲ್ಲಿ ಅಗ್ನಿ ಅವಘಡ; ಸ್ಥಳಕ್ಕೆ ಅಗ್ನಿಶಾಮಕಪಡೆ ನೀರು ಖಾಲಿ
ಮಡಿಕೇರಿ: ಗೋಣಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿರುವ ಪೇಂಟ್ಸ್ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕಪಡೆ ಬಂದು ಬೆಂಕಿ ನಂದಿಸಲು ಯತ್ನಿಸಿದರೂ ನೀರು ಖಾಲಿಯಾಗಿದೆ. ಬೆಂಕಿ ಧಗಧಗಿಸುತ್ತಿದ್ದು, ಸದ್ಯ ಗ್ರಾಮ ಪಂಚಾಯತ್ ನೀರಿನ ವ್ಯವಸ್ಥೆ ಮಾಡುತ್ತಿದೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹರಡುವ ಭೀತಿ ಮೂಡಿದ್ದು, ಸ್ಥಳದಲ್ಲಿ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ.