ಗ್ಯಾರೇಜ್ ನಲ್ಲಿ ಧಿಡೀರ್ ಕಾಣಿಸಿಕೊಂಡ ಬೆಂಕಿ : 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಭಸ್ಮ
ಬೆಂಗಳೂರು : ಕಾರು ಗ್ಯಾರೇಜ್ ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡು 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಸಂಭವಿಸಿದೆ.
ಕೋಟ್ಯಾಂತರ ರೂಪಾಯಿ ಮೌಲ್ಯದ 10 ಕ್ಕೂ ಅಧಿಕ ಐಷಾರಾಮಿ ಕಾರುಗಳು ಸುಟ್ಟು ಕರಕಲಾಗಿದ್ದು, ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.