ಗ್ರಾಮ ಪಂಚಾಯಿತಿಗಳ ಸಬಲೀಕರಣವೇ ರಾಜ್ಯ ಸರ್ಕಾರದ ಗುರಿ : ಮುಖ್ಯಮಂತ್ರಿ ಬೊಮ್ಮಾಯಿ

ಗ್ರಾಮ ಪಂಚಾಯಿತಿಗಳ ಸಬಲೀಕರಣವೇ ರಾಜ್ಯ ಸರ್ಕಾರದ ಗುರಿ : ಮುಖ್ಯಮಂತ್ರಿ ಬೊಮ್ಮಾಯಿ

ಬೀದರ್:ಗ್ರಾಮ ಪಂಚಾಯಿತಿಗಳ ಸಬಲೀಕರಣವೇ ರಾಜ್ಯ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೀದರ್ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ (bjp) ಆಯೋಜಿಸಿದ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಗ್ರಾಮ ಪಂಚಾಯಿತಿಗಳ ಸಬಲೀಕರಣ ನಮ್ಮ ಸರ್ಕಾರದ ಗುರಿಯಾಗಿದೆ.

ಅದರಂತೆ ನಮ್ಮ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು

'ಸರ್ಕಾರಿ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ಕೊಂಡೊಯ್ಯಬೇಕು. ಮೂಲಭೂತ ಸೇವೆಗಳಿಗಾಗಿ ಜನರು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರವು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಕಾರ ವಿಕೇಂದ್ರೀಕರಣ ಇದರ ಉದ್ದೇಶವಾಗಿದೆ'ಎಂದರು.

'ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 3,000 ಕೋಟಿ ರೂ.ಗಳ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಹಿಂದಿನ ಕಾಂಗ್ರೆಸ್ ಆಡಳಿತವು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ವಿಫಲವಾಗಿತ್ತು. ನಮ್ಮ ಸರ್ಕಾರವು ಈ ಪ್ರದೇಶದಲ್ಲಿ 1400 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದು ಬೊಮ್ಮಾಯಿ ಹೇಳಿದರು