ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮ್ಯಾ ಸ್ಪರ್ಧೆ
ರಾಮನಗರ : ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು, ಚೆನ್ನಪಟ್ಟಣದಲ್ಲಿ ಜೆಡಿಎಸ್, ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ಪ್ಲಾನ್ ನಡೆಸಿದ್ದು, ಚನ್ನಪಟ್ಟಣದಿಂದ ಕೈ ಅಭ್ಯರ್ಥಿಯಾಗಿ ನಟಿ ರಮ್ಯಾರನ್ನು ಕಣಕ್ಕಳಿಸಲು ನಿರ್ಧರಿಸಿದೆ ಎನ್ನಲಾಗಿದೆ
ಚನ್ನಪಟ್ಟಣದಿಂದ ಅಭ್ಯರ್ಥಿಯಾಗಿ ನಟಿ ರಮ್ಯಾರನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್, ಬಿಜೆಪಿಗೆ ಕೌಂಟರ್ ಕೊಡಲು ಸಿದ್ಧತೆ ನಡೆಸುತ್ತಿದ್ದಾರೆ. ಈ ವಿಚಾರ ಕ್ಷೇತ್ರದೆಲ್ಲೆಡೆ ಚರ್ಚೆ ಆಗ್ತಿದ್ದು, ರಾಜ್ಯ ಕಾರಣದಲ್ಲಿ ಸಂಚಲನ ಮೂಡಿಸಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‍ನಿಂದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಎಂಎಲ್‍ಸಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿನ್ನೆಲೆ ಜೆಡಿಎಸ್ ಮತ್ತು ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ರಮ್ಯಾರನ್ನು ಕಣಕ್ಕಿಳಿಸಲು ಮುಂದಾಗಿದೆ.
ರಮ್ಯಾರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದರಿಂದ ಪಕ್ಷದ ಸಾಂಪ್ರದಾಯಿಕ ಮತಗಳ ಜೊತೆಗೆ ಮಹಿಳಾ ಮತದಾರರನ್ನು ಸೆಳೆಯಬಹುದು ಎನ್ನುವ ಲೆಕ್ಕಾಚಾರದೊಂದಿಗೆ ರಮ್ಯಾಗೆ ಟಿಕೆಟ್ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.