ಚಲಿಸುತ್ತಿದ್ದ ಲಾರಿ ಮೇಲೆ ಮುರಿದು ಬಿದ್ದ ಕಬ್ಬಿಣದ ಸಲಾಕೆ : ತಪ್ಪಿದ ಅನಾಹುತ

ಹುಬ್ಬಳ್ಳಿ : ವೇಗವಾಗಿ ಚಲಿಸುತ್ತಿದ್ದ ಲಾರಿ ಮೇಲೆ ಕಬ್ಬಿಣದ ಸಲಾಕೆಯೊಂದು ಮುರಿದು ಬಿದ್ದ ಪರಿಣಾಮ ಭಾರೀ ಅನಾಹುತ ತಪ್ಪಿದ ಘಟನೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ .
ಭಾರೀ ವಾಹನ ತಡೆಗೆ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಕಬ್ಬಿಣದ ಸಲಾಕೆಯ ತಡೆಗಳನ್ನು ನಿರ್ಮಿಸಲಾಗುತ್ತದೆ.ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತದೇ ಒಂದು ಕಬ್ಬಿಣದ ಸಲಾಕೆ ಚಲಿಸುತ್ತಿದ್ದ ಲಾರಿಯ ಮೇಲೆ ಬಿದ್ದು ,ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಈ ಘಟನೆ ಕಂಡು ಭಯ ಭೀತರಾಗಿದ್ದಾರೆ. ಈ ಘಟನೆ ಬಗ್ಗೆ ಕೂಡಲೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.