ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ: ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ: ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು

ಆಂಧ್ರ ಪ್ರದೇಶ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿಂತೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ತಿಮ್ಮ ರಾಜಪಾಲೆಂ ಬಳಿ ಖಾಸಗಿ ಟೂರಿಸ್ಟ್ ಬಸ್ ವೊಂದರಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಸ್ ಸುಟ್ಟು ಕರಕಲಾಗಿದೆ. ಬಸ್ಸಿನಲ್ಲಿದ್ದ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ.

ಹೈದರಾಬಾದಿನಿಂದ ಪ್ರಕಾಶಂ ಜಿಲ್ಲೆಯ ಚಿರಾಲ ಕಡೆಗೆ ಬರುತ್ತಿದ್ದ ವೊಲ್ವೊ ಬಸ್ ನಲ್ಲಿ 30 ಪ್ರಯಾಣಿಕರಿದ್ದರು ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.