ಚಳಿಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ; ಸುವರ್ಣಸೌಧದ 1KM ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಡಿಸೆಂಬರ್ 19ರಿಂದ ಡಿ.30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ 10ನೇ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಶುರುವಾಗಿವೆ. ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ. ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧ ಹೇರಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.