ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್ : ಈ ಜಿಲ್ಲೆಗಳಲ್ಲಿ ಇನ್ನೂ 1 ವಾರ ವಿಪರೀತ ಚಳಿ!

ಬೆಂಗಳೂರು : ಚಳಿಯಿಂದ ತತ್ತರಿಸಿರುವ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಶೀತ ಗಾಳಿ ಮುಂದುವರೆಯಲಿದ್ದು, ಚಳಿ ಹೆಚ್ಚಳವಾಗಲಿದೆ.
ಜನವರಿ 20 ರವರೆಗೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಲಿದ್ದು, ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ನಿನ್ನೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.