ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು : ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಡಿಸೆಂಬರ್ 8 ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 8, 9 ಮತ್ತು 10ರಂದು ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಐದು ದಿನವು ಒಣಹವೆ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.