ಚಳ್ಳಕೆರೆಯಲ್ಲಿ ಲಾರಿ- ಬೈಕ್ ನಡುವೆ ಭೀಕರ ಅಪಘಾತ : ಯುವಕನ ದೇಹ ಛಿದ್ರ ಛಿದ್ರ

ಚಳ್ಳಕೆರೆಯಲ್ಲಿ ಲಾರಿ- ಬೈಕ್ ನಡುವೆ ಭೀಕರ ಅಪಘಾತ : ಯುವಕನ ದೇಹ ಛಿದ್ರ ಛಿದ್ರ

ಳ್ಳಕೆರೆ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕರೆ ನಗರದ ಜೈನ್ ಕಲ್ಯಾಣ ಮಂಟಪದ ಮುಂಭಾಗದಲ್ಲಿ ನಡೆದಿದೆ.

ಮೃತನನ್ನು ತಾಲೂಕಿನ ಗೊರ್ಲತ್ತು ಗ್ರಾಮದ ಮಂಜುನಾಥ್ (22) ಎಂದು ಗುರುತಿಸಲಾಗಿದೆ.

ವೇಗವಾಗಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮಂಜುನಾಥ್ ಲಾರಿ ಚಕ್ರಕ್ಕೆ ಸಿಲುಕಿದ್ದು, ಲಾರಿ 50 ಅಡಿಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದಾನೆ.

ಅಪಘಾತ ನಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಯುವಕನ ದೇಹ ಛಿದ್ರ ಛಿದ್ರವಾಗಿದೆ.