ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಹಿನ್ನೆಲೆ; ಚಾಮರಾಜನಗರದಲ್ಲಿ ಕಟ್ಟೆಚ್ಚರ

ಚಾಮರಾಜನಗರ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಶುರುವಾಗಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಹಕ್ಕಿಜ್ವರ ಹರಡದಂತೆ ಚಾಮರಾಜನಗರ ಜಿಲ್ಲೆಯಲ್ಲಿ ಮುನ್ನಚ್ಚರಿಕೆ ಕ್ರಮ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆಗೆ ಬರುತ್ತಿರುವ ಕೇರಳ ವಾಹನಗಳ ತಪಾಸಣೆ ಮಾಡಲಾಗಿದೆ. ಎಲ್ಲಾ ವಾಹನಗಳಿಗೂ ಸೋಡಿಯಂ ಹೈಪ್ಲೋರೈಡ್ ದ್ರಾವಣ ಸಂಪಡಣೆ ಮಾಡಲಾಗಿದೆ. ಮೂಲೆಹೊಳೆ ಬಳಿ ಚೆಕ್ ಪೋಸ್ಟ್ ತೆರೆದ ಪಶುಸಂಗೋಪನೆ ಇಲಾಖೆ ಕ್ರಮ ಕೈಗೊಂಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆಯಲ್ಲಿ ಚೆಕ್ ಪೋಸ್ಟ್ ಮಾಡಲಾಗಿದೆ. ಕೇರಳದಿಂದ ಬರುವ ವಾಹನಗಳ ತಪಾಸಣೆಯನ್ನು ಇಲಾಖೆ ಮಾಡುತ್ತಿದೆ. ಉಪ ನಿರ್ದೇಶಕ ಡಾ. ಶಿವಣ್ಣ ಮಾರ್ಗದರ್ಶದಲ್ಲಿ ವಾಹನಗಳ ತಪಾಸಣೆ ಮಾಡಲಾಗಿದೆ.