ಚಾಮರಾಜನಗರದಲ್ಲಿ ರೈತನ ಮೇಲೆ ಎರಗಿದ ಹುಲಿ , ಬೆಚ್ಚಿಬಿದ್ದ ಜನ
ಚಾಮರಾಜನಗರ : ಚಾಮರಾಜನಗರದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ರೈತರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬಂಡೀಪುರ ಕಾಂಡಚಿನ ಗ್ರಾಮ ಚೌಡಹಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಹುಲಿ ಎರಗಿದೆ.
ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.