ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ಬೆಂಕಿ ಹಚ್ಚಿಕೊಂಡ ಮೂವರು ಸಾವು, ಓರ್ವ ಗಂಭೀರ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿ, ಮೂವರು ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ.
ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಸಾವನ್ನಪ್ಪಿದ್ದು, ಪತಿಯ ಸ್ಥಿತಿ ಗಂಭೀರವಾಗಿದೆ. ನೇತ್ರಾವತಿ(37) ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ . ಪತಿ ಸೊನ್ನೇಗೌಡ(48)ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣವೆನೆಂದು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.