ಚಿಕ್ಕಮಗಳೂರಲ್ಲಿ ಮುಂದಿನ 1 ತಿಂಗಳೊಳಗೆ ' ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ' : ಸಿಎಂ ಬೊಮ್ಮಾಯಿ ಘೋಷಣೆ

ಚಿಕ್ಕಮಗಳೂರು: ಮುಂದಿನ ಒಂದು ತಿಂಗಳೊಳಗೆ ಚಿಕ್ಕಮಗಳೂರಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರಿನ ಕಡೂರಿನಲ್ಲಿ ಘೋಷಣೆ ಮಾಡಿದ್ದಾರೆ.
ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಬಿಜೆಪಿ ಸಂಕಲ್ಪ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು 32 ಲಕ್ಷ ರೈತರಿಗೆ 20 ಸಾವಿರ ಕೋಟಿಗಿಂತ ಹೆಚ್ಚು ಸಾಲ ನೀಡಿದ್ದೇವೆ. ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ ನೀಡಿದ್ದೇವೆ ಎಂದು ತಿಳಿಸಿದರು.
ಬೆಳೆ ಕಳೆದುಕೊಂಡ ರೈತರಿಗೆ ಒಂದೂವರೆ ತಿಂಗಳಲ್ಲೇ ಪರಿಹಾರ ನೀಡಿದ್ದೇವೆ. 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಕೇವಲ ಒಂದೇ ವರ್ಷದ ಅವಧಿಯಲ್ಲಿ ಶಾಲಾ ಕೊಠಡಿ ನಿರ್ಮಾಣ ಪೂರ್ಣಗೊಳಿಸುತ್ತೇವೆ.
50 ಸಾವಿರ ತಾಂಡಾಗಳಿಗೆ ನಾವು ಹಕ್ಕು ಪತ್ರ ನೀಡುತ್ತಿದ್ದೇವೆ. 3 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಗೆ ಅನುಮೋದನೆ ನೀಡಿದ್ದೇವೆ. 6 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ. ಇದು ನಿಜವಾದ ಸಾಮಾಜಿಕ ನ್ಯಾಯ ಎಂದು ಹೇಳಿದರು.