ಚಿಕ್ಕಮಗಳೂರಿನಲ್ಲಿ ಇಂದು ಬೃಹತ್ ದತ್ತಜಯಂತಿ ಶೋಭಾಯಾತ್ರೆ

ಚಿಕ್ಕಮಗಳೂರು: ದತ್ತಜಯಂತಿ ಅಂಗವಾಗಿ ಇಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ & ಐಜಿಪಿ ಚಂದ್ರಗುಪ್ತ ಮಂಗಳವಾರ ರಾತ್ರಿ ಚಿಕ್ಕಮಗಳೂರು ಭೇಟಿ ನೀಡಿ ಭದ್ರತಾ ಕ್ರಮಗಳನ್ನು, ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ಬಂದೋಬಸ್ತ್ ಅನ್ನು ಪರಿಶೀಲಿಸಿದ್ದಾರೆ. ಬಳಿಕ ದತ್ತಪೀಠಕ್ಕೂ ತೆರಳಿ ಅಲ್ಲಿನ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿ ಮಾಹಿತಿ ಪಡೆದಿದ್ದಾರೆ.