ಚಿತ್ರೀಕರಣದ ವೇಳೆ ಬಾಲಿವುಡ್ ನಿರ್ದೇಶಕ 'ರೋಹಿತ್ ಶೆಟ್ಟಿ'ಗೆ ಗಾಯ, ಆಸ್ಪತ್ರೆಗೆ ದಾಖಲು

ಹೈದರಾಬಾದ್'ನಲ್ಲಿ ಶನಿವಾರ ನಡೆದ 'ಇಂಡಿಯನ್ ಪೊಲೀಸ್ ಫೋರ್ಸ್' ವೆಬ್ ಸರಣಿಯ ಚಿತ್ರೀಕರಣದ ವೇಳೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕರ ಕೈಗೆ ಗಾಯವಾಗಿದೆ.