ಚಿಲುಮೆ ಸಂಸ್ಥೆಗೆ ಹಣ ನೀಡಿದವರ ವಿರುದ್ಧ ಸಿಬಿಐ, ಐಟಿ, ಇಡಿ ಯಾಕೆ ದಾಳಿ ನಡೆಸಿಲ್ಲ; ಸಿದ್ದರಾಮಯ್ಯ

ಚಿಲುಮೆ ಸಂಸ್ಥೆಗೆ ಹಣ ನೀಡಿದವರ ವಿರುದ್ಧ ಸಿಬಿಐ, ಐಟಿ, ಇಡಿ ಯಾಕೆ ದಾಳಿ ನಡೆಸಿಲ್ಲ; ಸಿದ್ದರಾಮಯ್ಯ

ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ರೂವಾರಿಗಳು ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು.ಆದರೂ ಆಯೋಗಕ್ಕೂ ಕೇರ್ ಮಾಡದೇ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೆ? ಸುಪ್ರೀಂ ಕೋರ್ಟ್​ ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಹೊಂಗಸಂದ್ರದ ಬಿಜೆಪಿಯ ಕಚೇರಿಯಲ್ಲಿ ಹಾಲಿ ಶಾಸಕರು ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಸತೀಶ್‍ರೆಡ್ಡಿ ನೇತೃತ್ವದಲ್ಲಿಯೇ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಕುರಿತು ತರಬೇತಿ ನೀಡಲಾಗಿದೆ. ಪರಿಷ್ಕರಣೆ ಕಾರ್ಯಕ್ಕಾಗಿಯೆ 25,000 ದಿಂದ 30,000 ರೂಪಾಯಿಗಳನ್ನು ನೀಡಿ ನೇಮಕಾತಿ ಮಾಡಲಾಗಿದೆ ಎಂದರು.