ಚೀನಾದಲ್ಲಿ ಕೋವಿಡ್ ಉಲ್ಬಣ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದ ಕೇಂದ್ರ

ಚೀನಾದಲ್ಲಿ ಕೋವಿಡ್ ಉಲ್ಬಣ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದ ಕೇಂದ್ರ

ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ ಮತ್ತು ಯುಎಸ್‌ ಯಲ್ಲಿ ಕೋವಿಡ್ -19 ಪ್ರಕರಣಗಳು ಹಠಾತ್ ಉಲ್ಬಣಗೊಂಡಿರುವ ಮಧ್ಯೆ ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡಲು ಕೋವಿಡ್ ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮ ಮಾಡುವಂತೆ ಕೇಂದ್ರ ಸರ್ಕಾರ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಇಂತಹ ಪ್ರಕ್ರಿಯೆಗಳು ದೇಶದಲ್ಲಿ ಪ್ರಸಾರವಾಗುತ್ತಿರುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಎಂದು ಅಭಿಪ್ರಾಯ ಪಟ್ಟಿದೆ.