ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ 'ಹರೀಶ್ ಪೂಂಜ' ವಿರುದ್ಧ ಎರಡು ದೂರು ದಾಖಲು

ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ ಎಂದು ಬಿಂಬಿಸಿ ಜಾಹೀರಾತು ನೀಡಿದ್ದಾರೆ. ಹಾಗೂ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ.30 ರಂದು ಬಲಿಂಜೆ ಎಂಬಲ್ಲಿ ಸಭಾ ಕಾರ್ಯಕ್ರಮ ನಡೆಸಿ ಬಳಿಕ ಜನರಿಗೆ ಊಟೋಪಚಾರ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಸೀರೆ, ಹಣ ಜಪ್ತಿ
ಶಿವಮೊಗ್ಗ : ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಸೀರೆ, ಹಣ ಜಪ್ತಿ ಮಾಡಿದ್ದಾರೆ.
ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಸೀರೆ ವಶಕ್ಕೆ ಪಡೆಯಲಾಗಿದ್ದು, ಇದರ ಬೆಲೆ ಅಂದಾಜು 4.5 ಕೋಟಿ ಎಂದು ಹೇಳಲಾಗಿದೆ. ಅದೇ ರೀತಿ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 1.40 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ, ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 20 ಲಕ್ಷ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.