ಚುನಾವಣೆ ನೀತಿ ಸಂಹಿತೆ ಜಾರಿ: ಸರ್ಕಾರಿ ವಾಹನ ಬಿಟ್ಟು ಆಟೋದಲ್ಲಿ ಮನೆಗೆ ತೆರಳಿದ ಸಂಸದ ದೇವೇಂದ್ರಪ್ಪ
ಬಳ್ಳಾರಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಹೋಗಿದ್ದಾರೆ.
ಸಂಸದ ದೇವೇಂದ್ರಪ್ಪ ಅವರು ಸರ್ಕಾರಿ ಬಿಟ್ಟು ಆಟೋದಲ್ಲಿ ಹೋಗಿದ್ದಾರೆ. ಇನ್ನು ಸಚಿವ ಕೆ.ಸಿ ನಾರಾಯಣಗೌಡ ತಾವು ಬಳಸುತ್ತಿದ್ದ ಕಾರಿಗೆ ಪೂಜೆ ಮಾಡಿಸಿ ಬಿಟ್ಟುಕೊಟ್ಟು ತಮ್ಮ ಸ್ವಂತ ಕಾರಿನಲ್ಲಿ ಹೋಗಿದ್ದಾರೆ.
ಹೌದು ಚುನಾವಣೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ದೇವೇಂದ್ರಪ್ಪ ಆಟೋದಲ್ಲಿ ತಮ್ಮ ಮನೆಗೆ ತೆರಳಿದ್ದಾರೆ. ನಿನ್ನೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಪುಮೇಯರ್ ಚುನಾವಣೆ ನಡೆದಿತ್ತು. ಈ ವೇಳೆ ಸಂಸದ ದೇವೇಂದ್ರಪ್ಪ ಅವರು ಪಾಲಿಕೆಗೆ ಬಂದಿದ್ದರು. ಈ ಸಂದರ್ಭದಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವನೆ ಮುಗಿಸಿ ಕಾರು ಬಿಟ್ಟು ಆಟೋದಲ್ಲಿ ಮನೆಗೆ ಹೋಗಿದ್ದಾರೆ.
ಮತದಾರರಿಗೆ ಗಿಫ್ಟ್ ಹಂಚುತ್ತಿದ್ದ ಆರೋಪ : ಶಾಸಕ ಶಾಮನೂರು, ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ `FIR' ದಾಖಲು
ಇನ್ನು ದಾವಣಗೆರೆ : ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿರುವ ಆರೋಪದಡಿ ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಗಿಫ್ಟ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಉಡುಗೊರೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ದೂರು ದಾಖಲಾಗಿದೆ