ಚುನಾವಣೆ ಹತ್ತಿರವಾಗುತ್ತಿದ್ದಂತೆ ರೌಡಿಗಳ ಮೇಲೆ ಪೊಲೀಸರ ಹದ್ದಿನಕಣ್ಣು: 35 ರೌಡಿಶೀಟರ್​ಗಳು ಮತ್ತೆ ಜೈಲಿಗೆ

ಚುನಾವಣೆ ಹತ್ತಿರವಾಗುತ್ತಿದ್ದಂತೆ ರೌಡಿಗಳ ಮೇಲೆ ಪೊಲೀಸರ ಹದ್ದಿನಕಣ್ಣು: 35 ರೌಡಿಶೀಟರ್​ಗಳು ಮತ್ತೆ ಜೈಲಿಗೆ
ರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಗರದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಾಂಡ್ ಉಲ್ಲಂಘಿಸಿ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ 35 ರೌಡಿಶೀಟರ್​ಗಳನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಗರದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬಾಂಡ್ ಉಲ್ಲಂಘಿಸಿ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆ ಈಗಾಗಲೇ 35 ರೌಡಿಶೀಟರ್​ಗಳನ್ನು ಪೊಲೀಸರು ಮತ್ತೆ ಜೈಲಿಗಟ್ಟಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಥಳೀಯ ಮುಖಂಡರೊಂದಿಗೆ ಓಡಾಟ, ಕೊಲೆ, ಕೊಲೆ ಯತ್ನ, ಕ್ರಿಮಿನಲ್ ಕೇಸ್ ಹಿನ್ನೆಲೆಯುಳ್ಳವರು ಸದ್ಯ ಜೈಲುಪಾಲಾಗಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಬಾಣಸವಾಡಿ, ಗೋವಿಂದಪುರ ಸೇರಿ ಹಲವು ಠಾಣಾ ವ್ಯಾಪ್ತಿಯ ರೌಡಿಗಳಾದ ಪಾಪಯ್ ಸುಹೇಲ್, ಛೋಟಾ ಸೈಯದ್‌, ಜೋಲು ಇಮ್ರಾನ್​ ಹುಸೇನ್  ಮೆಕ್ಯಾನಿಕ್ ಹುಸೇನ್ ಸೇರಿ ಹಲವರು ಜೈಲುಪಾಲಾಗಿದ್ದಾರೆ.

ಐಪಿಸಿ ಸೆಕ್ಷನ್ 110ರ ಅಡಿ ಉಲ್ಲಂಘನೆ ಹಿನ್ನೆಲೆ ಬಂಧಿಸಿದ್ದು, 6 ತಿಂಗಳ ಕಾಲ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

.ಪೊಲೀಸರ ಎಚ್ಚರಿಕೆ ನಡುವೆಯೂ ಮತ್ತೆ ಡ್ರಗ್ ಪೆಡ್ಲಿಂಗ್ ಸೇರಿ ಹಲವು ಕೃತ್ಯಗಳಲ್ಲಿ ರೌಡಿಗಳು ಭಾಗಿಯಾಗಿದ್ದರು. ಮುಂಜಾಗ್ರತೆಯಿಂದ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಕ್ರಮಕೈಗೊಳ್ಳಲಾಗಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಂತ ಹಂತವಾಗಿ ಪ್ರತಿ ವಿಭಾಗದಲ್ಲಿ ರೌಡಿಶೀಟರ್​​ಗಳ ಮಾಹಿತಿ ಸಂಗ್ರಹಿಸುತ್ತಿದ್ದು, ರೌಡಿಗಳ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದಾರೆ.