ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಶೀಘ್ರವೇ ಬಾಬೂರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ!

ಕಲಬುರಗಿ : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ್ ಅವರು ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಬಾಬೂರಾವ್ ಚಿಂಚನಸೂರ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿದ್ದು, ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.ಇಂದು ಬಿಜೆಪಿ ಎಂಎಲ್ ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯಲ್ಲಿ ಕಡೆಗಣನೆ ಹಿನ್ನೆಲೆ ಬಾಬೂರಾವ್ ಚಿಂಚನಸೂರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಳಿಕ ಚಿಂಚನಸೂರ್ ಅವರು ಯಾದಗಿರಿಯ ಗುರುಮಠಕಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.