ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : `MLC' ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ
ಶಿವಮೊಗ್ಗ : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ವಿಧಾನಪರಿಷತ್ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ತಕೆ ರಾಜೀನಾಮೆ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯದಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.
ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಇಚ್ಛೆ ಇದೆ. ಆಸೆಗೆ ಪೂರಕವಾಗಿ ಬಿಜೆಪಿ ಟಿಕೆಟ್ ನೀಡುವ ಲಕ್ಷಣ ಕಂಡುಬಂದಿಲ್ಲ. ಹೀಗಾಗಿ ಬಡವರ ಪ್ರತಿನಿಧಿಯಾಗಿ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತೇನೆ. ಈಶ್ವರಪ್ಪ, ಮಕ್ಕಳ ಹೆಸರು ಓಡಾಡುತ್ತಿದೆ ಎಂದಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಡಿದ ಮಾತು ನನಗೆ ಇಷ್ಟ ಆಗಲಿಲ್ಲ. ನನ್ನ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಚಿವರ ಸವಾಲನ್ನು ಸ್ವೀಕರಿಸಿದ್ದೇನೆ. ಈಶ್ವರಪ್ಪ ಸಮರ್ಥರಿದ್ದರೆ ನನ್ನ ಎದುರಿಸಲಿ. ಕೆ.ಎಸ್. ಈಶ್ವರಪ್ಪ ಅಭಿವೃದ್ಧಿ ಮಾಡಿಲ್ಲ. ಪ್ರಚೋದನೆಯೇ ಬಂಡವಾಳ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.