ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ!

ಚಿತ್ರದುರ್ಗ : ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಕೆ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂತ್ರಗಾರಿಕೆ ರೂಪಿಸಿದ್ದು, ಶೀಘ್ರವೇ ಕೆ. ಪೂರ್ಣಿಮಾ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ, ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಗೆ ಕರೆ ತರಲು ಯತ್ನ ನಡೆದಿದ್ದು, ಈ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ.