ಚುನಾವಣೆ ಹೊತ್ತಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಸಚಿವ!
ಮಂಡ್ಯ : ಚುನಾವಣೆ ಹೊತ್ತಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಚಿವ ನಾರಾಯಣಗೌಡ ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯ ಅವರು ಕೆ.ಆರ್. ಪೇಟೆ ತಾಲೂಕಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊನ್ನೇಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ, ಸಿದ್ದರಾಮಯ್ಯ ಅವರು ಕೆ.ಆರ್.ಪೇಟೆ ತಾಲೂಕಿಗೆ ಹಲವಾರು ಕೊಡುಗೆ ನೀಡಿದ್ದಾರೆ.ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರವಾದ ಗೌರವವಿದೆ.