ಚುನಾವಣೆ ಹೊತ್ತಲ್ಲೇ ರಾಜ್ಯಕ್ಕೆ ಭರ್ಜರಿ ಕೊಡುಗೆ

ಚುನಾವಣೆ ಹೊತ್ತಲ್ಲೇ ರಾಜ್ಯಕ್ಕೆ ಭರ್ಜರಿ ಕೊಡುಗೆ

ವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ರಾಜ್ಯದ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭರ್ಜರಿ ಕೊಡುಗೆ ನೀಡಲಾಗಿದೆ.

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬಗ್ಗೆ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಬೇಲೂರಿನಿಂದ ಹಾಸನದವರೆಗಿನ ರಸ್ತೆ ಅಗಲೀಕರಣ ಯೋಜನೆಗೆ 698.08 ಕೋಟಿ ರೂ.

ಅನುದಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪ್ಯಾಕೇಜ್ 2 ಯೋಜನೆ ಅಡಿಯಲ್ಲಿ ಬೇಲೂರಿನಿಂದ ಹಾಸನ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.