ಚುನಾವಣೆಗಾಗಿ ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿ

ಚುನಾವಣೆಗಾಗಿ ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿ

ಚಿಕ್ಕಮಗಳೂರು : ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಿಗೆ ಹತಾಶೆಯಾಗಿದೆ.

ಕಾಂಗ್ರೆಸ್ ಸುಳ್ಳು ಹೇಳುತ್ತಿದ್ದಾರೆಂಬುದು ಇತಿಹಾಸವೇ ಹೇಳುತ್ತಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ರಾಜಸ್ಥಾನದಲ್ಲಿ ನೀಡಿದ್ದ ಭರವಸನ್ನು ಕಾಂಗ್ರೆಸ್ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆ ಈಡೇರಿಸಿಲ್ಲ. ರಾಜ್ಯದಲ್ಲಿ ಚುನಾವಣೆಗಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ

ದೇಶದಲ್ಲಿ ಕಾಂಗ್ರೆಸ್ ನಂ.1 ಭ್ರಷ್ಟ ಪಕ್ಷವಾಗಿದ್ದು, ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಕದನ ಶುರುವಾಗಲಿದೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರ ಬಿಟ್ಟು ಹೊರಗೆ ಬರುವ ಪರಿಸ್ಥಿತಿ ಬಂದಿದೆ. ನಮ್ಮ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.