ಚುನಾವಣೆಗಾಗಿ ಬಿಜೆಪಿಯವರು ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾರ್ ವಾಗ್ದಾಳಿ

ಚುನಾವಣೆಗಾಗಿ ಬಿಜೆಪಿಯವರು ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು : ವಿಧಾನಸೌಧದ ಎದುರು ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬರುತ್ತಿದೆ ಎಂದು ಬಿಜೆಪಿ ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಬಿಜೆಪಿ ಅವರು ಸ್ವಂತ ಆಸ್ತಿಯಿಂದ ಪ್ರತಿಮೆ ಮಾಡಲಿ, ಒಳ್ಳೆ ಕೆಲಸ ಮಾಡಲಿ. ಚುನಾವಣೆ ಬಂತು ಅಂತ ತರಾತುರಿಯಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಅವರಿಗೆ ಗೊತ್ತಾಗಿದೆ ಎರಡು ತಿಂಗಳು ಮಾತ್ರ ಅವರ ಸರ್ಕಾರ ಇರೋದು ಅಂತ. ಹೀಗಾಗಿ ಪ್ರತಿಮೆ ಮಾಡಲು ಮುಂದಾಗ್ತಿದ್ದಾರೆ. ಬಿಜೆಪಿ ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.