ಚುನಾವಣೆಗೂ ಮುನ್ನವೇ 'ಮಹದಾಯಿ ಯೋಜನೆ' ಕಾಮಗಾರಿ ಆರಂಭ : ಸಚಿವ ಗೋವಿಂದ ಕಾರಜೋಳ
ಬೆಳಗಾವಿ : ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಮ್ಮ ಪಾಲಿನ ನೀರು ಬಳಕೆಗೆ ಯಾರ ಅಪ್ಪಣೆಯೂ ಬೇಕಿಲ್ಲ, ಕೋರ್ಟ್ ನೀರು ಹಂಚಿಕೆ ಮಾಡಿದೆ.
ನಮ್ಮ ಪಾಲಿನ 3.9 ಟಿಎಂಸಿ ನೀರು ಬಳಕೆ ಮಾಡುತ್ತೇವೆ, ಇದಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆಗೂ ಬೇಕಿಲ್ಲ. ಕೋರ್ಟ್ ನಿಂದ ಕರ್ನಾಟಕದ ಪಾಲಿನ ನೀರು ಹಂಚಿಕೆಯಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ?; ಪ್ರಹ್ಲಾದ್ ಜೋಶಿ ಟಾಂಗ್
ಕಾಂಗ್ರೆಸ್ ಬಂದ್ರೆ ಉಚಿತವಾಗಿ 10 ಕೆ.ಜಿ ಅಕ್ಕಿ ಘೋಷಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ? ಎಂದು ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾವು ಈಗಾಗಲೇ ಉಚಿತವಾಗಿ 5 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ನಾವು 10 ಕೆಜಿ ಅಕ್ಕಿ ಕೊಟ್ಟರೆ ಕಾಂಗ್ರೆಸ್ ನವರು 20ಕೆಜಿ ಅಂತಾರೆ.ಕಾಂಗ್ರೆಸ್ ನವರು ಹೇಳಿದ್ದನ್ನು ಯಾವುದಾರೂ ಮಾಡಿದ್ದಾರಾ? ಇದೇ ಕಾಂಗ್ರೆಸ್ ನವರು ಮೊದಲ ಗರೀಬಿ ಹಠಾವೋ ಅಂದವರು. ಅದೆಲ್ಲ ಆಗಿದ್ದರೆ ಇವತ್ತೇಕೆ ಮತ್ತೆ ಅಕ್ಕಿ ಕೊಡುವ ಸ್ಥಿತಿ ಬರ್ತಿತ್ತು? ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳುವ ನಿಸ್ಸೀಮವಾಗಿರುವ ಪಕ್ಷ. ದೇಶದಲ್ಲಿ ಕಾಂಗ್ರೆಸ್ ನವರು 57-58 ವರ್ಷ ಆಡಳಿತ ಮಾಡಿದ್ದಾರೆ. ಈಗಲೂ ವಿದ್ಯುತ್ ಕೊಡುತ್ತೇವೆ ಅಂತಾ ಕಾಂಗ್ರೆಸ್ ಹೇಳುತ್ತೆ. ಈಗ ನಾವು 24 ಗಂಟೆಗಳ ಕಾಲ ವಿದ್ಯುತ್ ಕೊಡುತ್ತಿದ್ದೇವೆ. ಕಾಂಗ್ರೆಸ್ ನವರು ಈಗ ಉಚಿತ ವಿದ್ಯುತ್ ಕೊಡುತ್ತೇವೆ ಅಂತಾರೆ. 58 ವರ್ಷದ ಅಧಿಕಾರದಲ್ಲಿದ್ರಲ್ಲಾ ನಿಮಗೆ ನಾಚಿಕೆ ಆಗುವುದಿಲ್ವೇ? ಸುಳ್ಳು ಹೇಳುವುದು ಕಾಂಗ್ರೆಸ್ ನವರ ಡಿಎಸ್ ಎನಲ್ಲೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.