ಚುನಾವಣೆಯಲ್ಲಿ 113ಕ್ಕಿಂತ ಹೆಚ್ಚು ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಾ.ಜಿ ಪರಮೇಶ್ವರ್

ಚುನಾವಣೆಯಲ್ಲಿ 113ಕ್ಕಿಂತ ಹೆಚ್ಚು ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಾ.ಜಿ ಪರಮೇಶ್ವರ್

ತುಮಕೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ವಲಯದಲ್ಲಿ ಚಟುವಟಿಕೆಗಳು ರಂಗೇರಿದೆ. ರಾಜಕೀಯ ನಾಯಕರ ಚುನಾವಣೆ ಭರಾಟೆ ಜೋರಾದ್ರೆ, ಇತ್ತು ಪ್ರತಿಪಕ್ಷ ನಾಯಕರ ಆರೋಪ- ಪ್ರತ್ಯಾರೋಪಗಳು ಭುಗಿಲೆದ್ದಿದೆ.

ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.

113ಕ್ಕಿಂತ ಹೆಚ್ಚು ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿ ಅಂತಾ ಬೇರೆ ಇಲ್ಲ. ಕಾಂಗ್ರೆಸ್​ನಲ್ಲಿ ಜಾತಿಯಾಧಾರಿತ ಮುಖ್ಯಮಂತ್ರಿ ಆಯ್ಕೆ ಮಾಡಲ್ಲ. ಆ ಸಂದರ್ಭಕ್ಕೆ ಯಾರು ಸಮರ್ಥರಿದ್ದಾರೆ ಅವರನ್ನು ಆಯ್ಕೆ ಮಾಡ್ತೀವಿ. ಪಕ್ಷದ ಧ್ಯೇಯೋದ್ದೇಶ ಮುನ್ನಡೆಸುವ ಸಾಮರ್ಥ್ಯ ಇದ್ದವರನ್ನು ಆಯ್ಕೆ ಮಾಡಲಾಗುತ್ತೆ.

ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಹುದ್ದೆಗೆ 10 ನಾಯಕರು ರೇಸ್​ನಲ್ಲಿದ್ದಾರೆ. ಅದರಲ್ಲಿ ನಾನು ಕೂಡ ಸಿಎಂ ಹುದ್ದೆ ಆಕಾಂಕ್ಷಿ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.