ಚೆಕಪ್ ಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ' : H.D ದೇವೇಗೌಡ ಟ್ವೀಟ್

ಚೆಕಪ್ ಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ' : H.D ದೇವೇಗೌಡ ಟ್ವೀಟ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿತ್ತು.

ಇದೀಗ ಈ ಹೆಚ್.ಡಿ ದೇವೇಗೌಡ ಟ್ವೀಟ್ ಮಾಡಿ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನಾನು ರುಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಯಾರೂ ಆತಂಕ ಪಡುವ ಅಗತ್ಯ ಇಲ್ಲ. ನಾನು ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಆಗಿ ಮನೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ.