ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ನಡೆಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ.ರಾಜ್ಯದ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದರು. ಇದರಿಂದ 10 ಲೇನ್ನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ. ನಾವು 16,730 ಕೋಟಿ ಮೌಲ್ಯದ ಈ 262 ಕಿ.ಮೀ ಉದ್ದದ 8 ಪಥದ ರಚನೆಯನ್ನು ನಿರ್ಮಿಸುತ್ತಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ. ನಂತರ ನಿತಿನ್ ಚನ್ನಪಟ್ಟಣ ಕಡೆಗೆ ತೆರಳಿ ನಂತರ ಬಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.