ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಣ್ಣೀರು ಹಾಕಿದ್ದ ವಾಸಿಂ ಅಕ್ರಮ್: ಸಹಾಯಕ್ಕೆ ಬಂದಿದ್ದ ಭಾರತೀಯರು!

ಕ್ರೀಡೆಗೆ ಎಂದೂ ಗಡಿಯ ಹಂಗಿಲ್ಲ, ಅದರಲ್ಲೂ ಕ್ರಿಕೆಟಿಗರಿಗೆ ಜಗತ್ತಿನಾದ್ಯಂತ ಅಭಿಮಾನಿಗಳು ಇದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಧೋನಿ ಸೇರಿದಂತೆ ಹಲವು ಕ್ರಿಕೆಟಿಗರು ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ.
ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಕೂಡ ಪಾಕಿಸ್ತಾನಿ ಆಟಗಾರರ ಬಗ್ಗೆ ಮಾಹಿತಿ ಇರುತ್ತದೆ. ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ವಾಸಿಂ ಅಕ್ರಂ ಭಾರತದಲ್ಲಿ ನಡೆದ ಒಂದು ಘಟನೆಯ ಬಗ್ಗೆ ನೆನಪು ಮಾಡಿಕೊಂಡಿದ್ದಾರೆ.