ಛತ್ತೀಸ್ ಗಢ: ಆಟೋಗೆ ಟ್ರಕ್ ಡಿಕ್ಕಿ: 7 ವಿದ್ಯಾರ್ಥಿಗಳ ದುರ್ಮರಣ

ಛತ್ತೀಸ್ ಗಢ: ಆಟೋಗೆ ಟ್ರಕ್ ಡಿಕ್ಕಿ: 7 ವಿದ್ಯಾರ್ಥಿಗಳ ದುರ್ಮರಣ

ರಾಂಚಿ: ಚತ್ತೀಸ್ ಗಢದ ಕಂಕೇರ್ ಜಿಲ್ಲೆಯ ಕೊರೆರ್ ಚಿಲ್ಹತಿ ಚೌಕ್ ನಲ್ಲಿ ಗುರುವಾರ ಮಧ್ಯಾಹ್ನ ಆಟೋ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಶಾಲಾ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ದೊರೆತ ಮಾಹಿತಿಯ ಪ್ರಕಾರ, ಆಟೋ ಚಾಲಕ ತನ್ನ ವಾಹನದಲ್ಲಿ ಎಂಟು ಶಾಲಾ ಮಕ್ಕಳನ್ನು ತಮ್ಮ ಮನೆಗೆ ಕರೆದೊಯ್ಯುತ್ತಿದ್ದಾಗ ಕೊರೆರ್ನಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ ಮತ್ತು ಆಟೋದ ಭಾಗಗಳು ಮುರಿದು, ಹಾರಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ಮೂವರು ಮಕ್ಕಳು ಮತ್ತು ಆಟೋ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರೆ, ಒಂದು ಮಗು ಮತ್ತು ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.