ಜ. 1 ರಿಂದ ಚೀನಾ ಸೇರಿ ಈ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್ಲೆಂಡ್ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಸರ್ಕಾರ ಆರ್ಟಿ-ಪಿಸಿಆರ್ ಪರೀಕ್ಷೆಗೆ ಕಡ್ಡಾಯಗಿಳಿಸಿ ಆದೇಶಿಸಿದೆ.
ಈ ಕುರಿತಂತೆ ಕೇಂದ್ರ ಾರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದು, ಪ್ರಯಾಣದ ಮೊದಲು 'ಏರ್ ಸುವಿಧಾ ಪೋರ್ಟಲ್'ನಲ್ಲಿ ತಮ್ಮ ಕೋವಿಡ್ ಪರೀಕ್ಷ ವರದಿಗಳನ್ನು ಅಪ್ಲೋಡ್ ಮಾಡುವಂತೆ ಸೂಚಿಸಿದ್ದಾರೆ.