ಜ. 19 ರಂದು ಕಲಬುರಗಿಗೆ ಮೋದಿ ಭೇಟಿ ವಿಚಾರ ; ಪ್ರಧಾನಿ ಕಾರ್ಯಕ್ರಮಕ್ಕೆ ಎಷ್ಟು ಕೋಟಿ ಖರ್ಚು ಮಾಡ್ತಾರೋ ಗೊತ್ತಿಲ್ಲ ?: ಹೆಚ್.ಡಿ ಕುಮಾರಸ್ವಾಮಿ

ಕಲಬುರಗಿ: ಜನವರಿ 19 ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆಪ್ರಧಾನಿ ಕಾರ್ಯಕ್ರಮಕ್ಕೆ ಎಷ್ಟು ಕೋಟಿ ಖರ್ಚು ಮಾಡ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಹಕ್ಕುಪತ್ರ ನೀಡಲು , ಬ್ಯಾರೇಜ್ ಉದ್ಘಾಟನೆಗೆ ಪ್ರಧಾನಿ ಕರೆಯುತ್ತಿದ್ದಾರೆ. ಈ ಎರಡು ಯೋಜನೆಗಳಿಗೆ ಪ್ರಧಾನಿ ಮೋದಿ ಕೊಡುಗೆ ಏನು ಎಂದು ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ. ಪಂಚಾಯಿತಿ ಸದಸ್ಯ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನಿ ಕರೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಸ್ಯಾಂಟ್ರೋ ರವಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದಾಗಿ ಸ್ಯಾಂಟ್ರೋ ರವಿ ಹೇಳಿದ್ದರು. ಈ ಬಗ್ಗೆ ಪೊಲೀಸರು ಮುಂದೆ ಸ್ಯಾಂಟ್ರೋ ರವಿ ಹೇಳಿಕೆ ನೀಡಿದ್ದಾನೆ ಎಂದು ಹೆಚ್ .ಡಿ ಕುಮಾರಸ್ವಾಮಿ ಹೇಳಿದ್ದಾರೆ.