ಜ.27 ರಿಂದ ಮೂರು ದಿನ ಅದ್ಧೂರಿ 'ಹಂಪಿ ಉತ್ಸವ' ಆಚರಣೆ

ಹೊಸಪೇಟೆ: 2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ ತಿಳಿಸಿದರು. ಜ.27, 28 & 29 ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು.