ಜ. 6 ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ

ಜ.6ಕ್ಕೆ ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳಾ ಕಾಂಗ್ರೆಸ್ ರಾಜ್ಯಾದ್ಯಂತ ಆಯೋಜಿಸಿದ್ದ 'ನಾ ನಾಯಕಿ' ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ನಗರದ ಕ್ವೀನ್ಸ್ ರಸ್ತೆಯಲ್ಲಿ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಗ್ರೆಸ್‌ನ ನೂತನ ಕಚೇರಿ ‘ಭಾರತ್ ಜೋಡೋ ಭವನ’ ಉದ್ಘಾಟನೆಗಾಗಿ ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಜ.6ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಬೃಹತ್ ಕಟ್ಟಡವು ಮೂರು ಅಂತಸ್ತುಗಳನ್ನು ಹೊಂದಿದೆ.