ಜ. 8ಕ್ಕೆ ಕಾಂಗ್ರೆಸ್‌ ನಿಂದ ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ

ಜ. 8ಕ್ಕೆ ಕಾಂಗ್ರೆಸ್‌ ನಿಂದ ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಮನವೊಲಿಕೆಗೆ ಎಲ್ಲಾ ಪಕ್ಷಗಳು ತೀವ್ರ ಕಸರತ್ತು ನಡೆಸುತ್ತಿವೆ. ಇದೀಗ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್‌ನಿಂದ ಜ. 8ರಂದು ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ ನಡೆಸಲಾಗುತ್ತದೆ. ಈ ಕುರಿತು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಬಹಳ ದಿನಗಳ ಬಳಿಕ ಎಸ್‌ಸಿ ಎಸ್‌ಟಿ ಸಮಾವೇಶ ನಡೆಯುತ್ತಿದೆ 224 ಕ್ಷೇತ್ರಗಳಿಂದ ಜನರು ಸಮಾವೇಶಕ್ಕೆ ಬರುವಂತೆ ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.