ಜ.10 ರಿಂದ ಆರಗ ಜ್ಞಾನೇಂದ್ರ ಗುಜರಾತ್​ ಪ್ರವಾಸ

ಜ.10 ರಿಂದ ಆರಗ ಜ್ಞಾನೇಂದ್ರ ಗುಜರಾತ್​ ಪ್ರವಾಸ

ರಾಜ್ಯದಲ್ಲಿ ವಿಧಿವಿಜ್ಞಾನ ವಿವಿ ಸ್ಥಾಪನೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಸಭೆ ಕೈಗೊಳ್ಳಲು ನಾಳೆ (ಜ.10)ರಿಂದ 3 ದಿನಗಳ ಕಾಲ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಆರಗ ಜ್ಞಾನೇಂದ್ರ ಅಹಮದಾಬಾದ್‌‌‌‌‌ನಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿವಿಯ ಉಪ ಕುಲಪತಿ & ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ವಿಧಿ ವಿಜ್ಞಾನ ವಿವಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ.