ಜ.11 ರಿಂದ ಕಾಂಗ್ರೆಸ್ 'ಪ್ರಜಾಧ್ವನಿ ಬಸ್ ಯಾತ್ರೆ' ಆರಂಭ

ಬೆಂಗಳೂರು : ಜ.11 ರಿಂದ ಕಾಂಗ್ರೆಸ್ ನ 'ಪ್ರಜಾಧ್ವನಿ ಬಸ್ ಯಾತ್ರೆ' ಆರಂಭವಾಗಲಿದೆ ಎಂದು ಮಾಜಿ ಸಚಿವ ಬಸವರಾಜ ರಾಯ ರೆಡ್ಡಿ ಹೇಳಿದ್ದಾರೆ.
ಜ.11 ರಿಂದ ಬೆಳಗಾವಿಯ ಟಿಳಕವಾಡಿಯಿಂದ 'ಪ್ರಜಾಧ್ವನಿ ಬಸ್ ಯಾತ್ರೆ' ಆರಂಭವಾಗಲಿದ್ದು, ಕೇಂದ್ರ, ರಾಜ್ಯದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಜ.11 ರಂದು ಇಲ್ಲಿನ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಅಂದು ಬೆಳಗ್ಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ ಬೆಳಗಾವಿಯ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಸಭೆ ನಡೆಯಲಿದೆ. ಜ.27 ರವರೆಗೆ 21 ಜಿಲ್ಲೆಗಳಲ್ಲಿ ಈ ಯಾತ್ರೆ ಸಂಚರಿಸಲಿದೆ ಎಂದು ಹೇಳಿದರು.
ಪ್ರಜಾಧ್ವನಿ ಬಸ್ ಯಾತ್ರೆ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 112 ವಿಧಾನಸಬೆ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇನ್ನೂ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಿದ್ದು, ಕಾರ್ಯಕರ್ತರ ಸಮಾವೇಶದಲ್ಲಿ ತಾವು ಕೋಲಾರದಿಂದ ಸ್ಪರ್ದಿಸುವ ಕುರಿತು ಘೋಷಣೆ ಮಾಡಿದ್ದಾರೆ.ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಕೋಲಾರಕ್ಕೆ ಹೋಗಿ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೆ ಕೋಲಾರಕ್ಕೆ ಬಂದಿದ್ದಾರೆ. ಈ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಇದೇ ವೇಳೆ ಕೋಲಾರದಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.